ಟ್ರ್ಯಾಕ್ಟರ್ ರ‍್ಯಾಲಿ ಸಂದರ್ಭದ ಹಿಂಸಾಚಾರ: ಭದ್ರತಾ ಲೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹ

Update: 2021-01-30 17:42 GMT

ಹೊಸದಿಲ್ಲಿ, ಜ.30: ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ಹಿಂಸಾಚಾರ ಹಾಗೂ ಭದ್ರತಾ ಲೋಪದ ಬಗ್ಗೆ ತಕ್ಷಣ ನಿಷ್ಪಕ್ಷಪಾತ ಮತ್ತು ಉನ್ನತ ಮಟ್ಟದ ತನಿಖಾ ಆಯೋಗ ರಚಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನೌಕಾಪಡೆಯ ನಿವೃತ್ತ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಬಹುತೇಕ ಪ್ರತಿಭಟನಾಕಾರರು ಶಾಂತರೀತಿಯಲ್ಲಿ ವರ್ತಿಸಿದ್ದರು ಎಂಬ ವಿಷಯವನ್ನು ಮುಖ್ಯವಾಹಿನಿಯ ಮಾಧ್ಯಮಗಳು ಕಡೆಗಣಿಸಿದ್ದು, ಕೆಂಪುಕೋಟೆಯ ಮೇಲೆ ತಂಡವೊಂದು ಧ್ವಜಾರೋಹಣ ನಡೆಸಿದ್ದ ಘಟನೆಯ ಬಗ್ಗೆ ತಮ್ಮ ಗಮನ ಕೇಂದ್ರೀಕರಿಸಿದ್ದವು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರೈತ ಮುಖಂಡರು ಹಾಗೂ ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದು ಅಡ್ಮಿರಲ್ ರಾಮದಾಸ್ ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News