ಮಂಗಳೂರು ಲೇಡಿಗೋಶನ್ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋಗೆ ಚಾಲನೆ: ಲಸಿಕೆ ಹಾಕಿಸಿಕೊಂಡ ಜಿಲ್ಲಾಧಿಕಾರಿ ಪುತ್ರಿ
Update: 2021-01-31 09:48 IST
ಮಂಗಳೂರು, ಜ.31: ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿಯವರು ದ.ಕ. ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ಪುಟ್ಟ ಮಗಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅನೇಕ ಕಂದಮ್ಮಗಳಿಗೆ ಶಾಸಕರು ಪೋಲಿಯೋ ಹನಿ ಹಾಕುವ ಮೂಲಕ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.