ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ
Update: 2021-01-31 10:20 IST
ಬೆಂಗಳೂರು, ಜ.31: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್-19 ಮುನ್ನೆಚ್ಚರಿಕೆ ಪಾಲಿಸಿಕೊಂಡು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಈ ಮೊದಲು ಎಷ್ಟೇ ಬಾರಿ ಪೋಲಿಯೊ ಲಸಿಕೆ ಹಾಕಿಸಿಕೊಂಡಿದ್ದರೂ ಇಂದು ಮತ್ತೊಮ್ಮೆ ಪೋಲಿಯೋ ಹನಿ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.