ಕನ್ನಡ ಬಳಕೆಗೆ ಕಾನೂನು ಅಡ್ಡಬಂದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು: ಸಿದ್ದರಾಮಯ್ಯ

Update: 2021-01-31 11:43 GMT

ಬೆಂಗಳೂರು, ಜ. 31: ‘ಕರ್ನಾಟಕ ರಾಜ್ಯದಲ್ಲಿ ಕನ್ನಡ ಭಾಷೆ ಬಳಕೆಗೆ ಕಾನೂನು-ನಿಯಮಗಳು ಅಡ್ಡಬರುತ್ತದೆ ಎಂದಾದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ರಾಜ್ಯದಲ್ಲಿ ನಡೆಯುವ ಸರಕಾರದ ಎಲ್ಲ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಕನ್ನಡ ಬಳಕೆ ಬಗ್ಗೆ ಕೇಂದ್ರ ಸರಕಾರದ ನಿಲುವು ಖಂಡನೀಯ' ಎಂದು ಟೀಕಿಸಿದ್ದಾರೆ.

‘ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಈ ಬಗ್ಗೆ ವಿವರಣೆ ಪಡೆದು ಕನ್ನಡ ಭಾಷೆಯ ಬಗ್ಗೆ ರಾಜ್ಯದ ಜನತೆಗೆ ತಿಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News