ಉಡುಪಿ ಕೃಷ್ಣ ಮಠಕ್ಕೆ ಲಕ್ಷ್ಮಣ್ ಸವದಿ ಭೇಟಿ
Update: 2021-01-31 17:59 IST
ಉಡುಪಿ, ಜ.31: ರಾಜ್ಯ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಇಂದು ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಅದಮಾರು ಮಠಾಧೀಶ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಸಚಿವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಮಟ್ಟಾರ್ ರತ್ನಾಕರ ಹೆಗ್ಡೆ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಪರ್ಯಾಯ ಮಠದ ವ್ಯವಸ್ಥಾಪಕರ ಗೋವಿಂದರಾಜ್, ಸಿಇಓ ಕಡೆಕಾರ್ ಶ್ರೀಶ ಭಟ್, ಕೃಷ್ಣ ಸೇವಾ ಸಮಿತಿಯ ರಾಮಚಂದ್ರ ರಾವ್, ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.