ಶಾಸಕ ಶರತ್ ಬಚ್ಚೇಗೌಡ ಸೇರಿ ಹಲವರ ವಿರುದ್ಧ ಎಫ್‍ಐಆರ್
Update: 2021-01-31 19:21 IST
ಬೆಂಗಳೂರು, ಜ.31: ಪೊಲೀಸರ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಶಾಸಕ ಶರತ್ ಬಚ್ಚೇಗೌಡ ಸೇರಿ 15 ಮಂದಿ ವಿರುದ್ಧ ಇಲ್ಲಿನ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಪೊಲೀಸರ ಲಾಠಿಚಾರ್ಜ್ ಖಂಡಿಸಿ ಶನಿವಾರ ರಾತ್ರಿ ಶರತ್ ಬಚ್ಚೇಗೌಡ ಮತ್ತು ಅವರ ಬೆಂಬಲಿಗರು ಪೊಲೀಸ್ ಠಾಣೆವರೆಗೂ ಕಾಲ್ನಡಿಗೆಯಲ್ಲಿ ಜಾಥಾ ನಡೆಸಿ, ಪೊಲೀಸ್ ಠಾಣೆಯನ್ನು ಮುತ್ತಿಗೆ ಹಾಕಲು ಪ್ರಯತ್ನಿಸಿದರು. ತದನಂತರ, ಹೆದ್ದಾರಿ ಎನ್‍ಹೆಚ್ 7 ರಸ್ತೆ ತಡೆದು ಸುಮಾರು 2 ಗಂಟೆಗೂ ಹೆಚ್ಚು ಕಾಲ ಪ್ರತಿಭಟಿಸಿದ್ದರು.
ಈ ಹಿನ್ನೆಲೆ ಪೊಲೀಸರು ಶರತ್ ಮತ್ತು ಇನ್ನಿತರ 15 ಜನರ ಮೇಲೆ ಸರಕಾರಿ ಕೆಲಸಕ್ಕೆ ಅಡ್ಡಿ ಮತ್ತು ಹೆದ್ದಾರಿ ತಡೆ ಮಾಡಿರುವುದಕ್ಕೆ ಐಪಿಸಿ 143, 147, 341, 283 ಮತ್ತು 149 ಅಡಿಯಲ್ಲಿ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.