ಉಡುಪಿ ಜಿಲ್ಲೆಯಲ್ಲಿ ರವಿವಾರ 9 ಮಂದಿಗೆ ಕೊರೋನ ಪಾಸಿಟಿವ್

Update: 2021-01-31 14:00 GMT

ಉಡುಪಿ, ಜ.31:ಜಿಲ್ಲೆಯ ಒಟ್ಟು 9 ಮಂದಿಯಲ್ಲಿ ರವಿವಾರ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ಎಂಟು ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 44ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಆರು ಮಂದಿ ಪುರುಷರು ಹಾಗೂ ಮೂವರು ಮಹಿಳೆಯರು. ಇವರಲ್ಲಿ ಮೂವರು ಉಡುಪಿ ತಾಲೂಕಿನವರಾದರೆ ನಾಲ್ವರು ಕುಂದಾಪುರ ತಾಲೂಕು ಹಾಗೂ ಇಬ್ಬರು ಕಾರ್ಕಳ ತಾಲೂಕಿನವರು. ಶನಿವಾರ ಎಂಟು ಮಂದಿ ಸೋಂಕಿನಿಂದ ಮುಕ್ತರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಸಂಖ್ಯೆ ಈಗ 23,095ಕ್ಕೇರಿದೆ.

ಇಂದು ಪಾಸಿಟಿವ್ ಬಂದವರಲ್ಲಿ ಆರು ಮಂದಿ ಪುರುಷರು ಹಾಗೂ ಮೂವರು ಮಹಿಳೆಯರು. ಇವರಲ್ಲಿ ಮೂವರು ಉಡುಪಿ ತಾಲೂಕಿನವರಾದರೆ ನಾಲ್ವರು ಕುಂದಾಪುರ ತಾಲೂಕು ಹಾಗೂ ಇಬ್ಬರು ಕಾರ್ಕಳ ತಾಲೂಕಿನವರು. ಶನಿವಾರ ಎಂಟು ಮಂದಿ ಸೋಂಕಿನಿಂದ ಮುಕ್ತರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಸಂಖ್ಯೆ ಈಗ 23,095ಕ್ಕೇರಿದೆ.

1128 ಮಂದಿ ನೆಗೆಟಿವ್: ಶನಿವಾರ ಜಿಲ್ಲೆಯ 1137 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1128 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 9 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,328 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,35,376 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,12,048 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಇದುವರೆಗೆ ಒಟ್ಟು 189 ಮಂದಿ ಮೃತಪಟ್ಟಿದ್ದಾರೆ.

ಫೆ.3ರವರೆಗೆ ಲಸಿಕೆ ಇಲ್ಲ: ಜಿಲ್ಲೆಯಲ್ಲಿ ಫೆ.3ರವರೆಗೆ ಪಲ್ಸ್ ಪೊಲಿಯೊ ಲಸಿಕೆ ನೀಡುವ ಕಾರ್ಯಕ್ರಮವಿರುವುದರಿಂದ ಇಂದಿನಿಂದ ಫೆ.3ರವರೆಗೆ ಕೋವಿಡ್ ಲಸಿಕೆ ಕಾರ್ಯಕ್ರಮವಿರುವುದಿಲ್ಲ ಎಂದು ಡಾ.ಸೂಡಾ ತಿಳಿಸಿದ್ದಾರೆ. ಇದುವರೆಗೆ ಜಿಲ್ಲೆಯ ಒಟ್ಟು ಗುರಿಯಾದ 22,103 ಆರೋಗ್ಯ ಕಾರ್ಯಕರ್ತರಲ್ಲಿ 12,403 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಈ ಮೂಲಕ ಶೇ.56.11 ಸಾಧನೆ ಮಾಡಲಾಗಿದೆ ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News