ಗ್ರಾಮಾಂತರ ಬಸ್‌ನಿಲ್ದಾಣದ ಕಾಮಗಾರಿ ಪರಿಶೀಲನೆ
ಉಡುಪಿ, ಜ.31: ನಗರದ ಬನ್ನಂಜೆಯಲ್ಲಿ 31ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಾಮಾಂತರ ಬಸ್ ನಿಲ್ದಾಣದ ಕಾಮ ಗಾರಿಯನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ಪರಿಶೀಲನೆ ನಡೆಸಿದರು.
ಈ ವೇಳೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಸಚಿವರು ಅಧಿ ಕಾರಿಗಳಿಗೆ ಸೂಚಿಸಿದರು. ಈ ಬಸ್ ನಿಲ್ದಾಣದಲ್ಲಿ ಮಲ್ಟಿಫ್ಲೆಕ್ಸ್ ಸಿನೆಮ ಮಂದಿರ ಕ್ಕೂ ಟೆಂಡರ್ ಕರೆಯಬೇಕು ಮತ್ತು ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಅವರ ಹೆಸರು ಇಡಬೇಕು ಎಂದು ಶಾಸಕ ಕೆ.ರಘುಪತಿ ಭಟ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಂ.ಚಂದ್ರಪ್ಪ, ಉಪಾಧ್ಯಕ್ಷರಾದ ಎಸ್.ಎನ್. ಈಶ್ವರಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಮತ್ತು ಕೆ.ಎಸ್.ಆರ್.ಟಿ.ಸಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.