ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2021-01-31 14:19 GMT

ಉಡುಪಿ, ಜ.31: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿಎಸ್.ಟಿಗೆ 2.50ಲಕ್ಷ ರೂ. ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1 ಲಕ್ಷ ರೂ. ಇರಬೇಕು.  www. bcwd.karnataka.gov.in ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆ.10 ಕೊನೆಯ ದಿನಾಂಕ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News