ವಿಪತ್ತು ನಿರ್ವಹಣೆ; ರಕ್ಷಣಾ ತರಬೇತಿ ಶಿಬಿರ
Update: 2021-01-31 19:57 IST
ಮಂಗಳೂರು, ಜ.31: ಪ್ರಸ್ತುತ ಸಾಲಿನಲ್ಲಿ ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಪಂ ಅನುದಾನದಡಿ ಜಿಲ್ಲೆಯ ಯುವಜನರಿಗೆ 10 ದಿನಗಳ ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತ ಯುವಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶಿಬಿರದಲ್ಲಿ ಭಾಗವಹಿಸುವ ಯುವಜನರು 18 ರಿಂದ 30 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಫೆ.5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದೂ.ಸಂ.: 0824-2451264 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.