×
Ad

ಸರಕಾರಿ ನೌಕರರ ಕ್ರೀಡಾಕೂಟ ಮುಂಡೂಡಿಕೆ

Update: 2021-01-31 19:58 IST

 ಮಂಗಳೂರು, ಜ.30: ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಫೆ.2ರಂದು ನಿಗದಿಯಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಫೆ.11ರಂದು ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಹಾಗೂ ಫೆ.3ರಂದು ನಿಗದಿಯಾಗಿದ್ದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆ.12ರಂದು ಬೆಳಗ್ಗೆ 10 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824-2451264ನ್ನು ಸಂಪರ್ಕಿಸಲು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News