ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಯತ್ನ: ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

Update: 2021-01-31 18:43 GMT

ಬೆಂಗಳೂರು, ಜ.31: ಕಟ್ಟಡದಿಂದ ಜಿಗಿದು ಮಹಿಳೆವೊಬ್ಬಳು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದು, ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಆಕೆಯನ್ನು ಉಳಿಸಿರುವ ಘಟನೆ ಇಲ್ಲಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪುಟ್ಟೇನಹಳ್ಳಿಯ ಆರ್‍ಬಿ ಲೇಔಟ್‍ನಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ಕಲಹಕ್ಕೆ ಬೇಸತ್ತು ತಾನು ಕೆಲಸಕ್ಕೆ ಹೋಗುವ ಗಾರ್ಮೆಂಟ್ಸ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಈ ಸಂದರ್ಭದಲ್ಲಿ ಕಟ್ಟಡದ ಮೇಲೆ ಆಕೆ ನೇತಾಡುತ್ತಿರುವುದು ಕಂಡು ಸಹೋದ್ಯೋಗಿಗಳು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪುಟ್ಟೇನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News