ಪ್ರಧಾನಿ ಮೋದಿ ಮಾತು ತಂಡವನ್ನು ಮತ್ತಷ್ಟು ಬಲಪಡಿಸುತ್ತದೆ: ರವಿ ಶಾಸ್ತ್ರಿ
Update: 2021-02-01 10:10 IST
ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತೇಜನಕಾರಿ ಮಾತುಗಳು ಕ್ರಿಕೆಟ್ ತಂಡವನ್ನು ಮತ್ತಷ್ಟು ಬಲಪಡಿಸುತ್ತದೆ ಹಾಗೂ ಒತ್ತಡದಲ್ಲಿ ಪ್ರದರ್ಶನ ನೀಡುವ ಸಂಕಲ್ಪವನ್ನು ಹೆಚ್ಚಿಸುತ್ತದೆ ಎಂದು ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ರವಿವಾರ ಹೇಳಿದ್ದಾರೆ.
ಆಸ್ಟ್ರೇಲಿಯ ವಿರುದ್ಧ ಟೆಸ್ಟ್ ಸರಣಿ ಗೆಲುವಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ಮೋದಿ ಅವರು ಇಂದು ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದರಿಂದ ಶಾಸ್ತ್ರಿ ಅವರ ಈ ಹೇಳಿಕೆ ನೀಡಿದ್ದಾರೆ. ತಂಡದ ಕಠಿಣ ಪರಿಶ‍್ರಮ ಹಾಗೂ ಟೀಮ್ ವರ್ಕ್ ಸ್ಫೂರ್ತಿದಾಯಕ ಎಂದು ಪ್ರಧಾನಿ ಹೇಳಿದ್ದರು.
ಧನ್ಯವಾದಗಳು ಸರ್. ನಿಮ್ಮ ಈ ರೀತಿಯ ಮಾತುಗಳು ಟೀಮ್ ಇಂಡಿಯಾವನ್ನು ಮತ್ತಷ್ಟು ಬಲಗೊಳಿಸಲಿದೆ.ಒತ್ತಡದ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡುವ ಸಂಕಲ್ಪವನ್ನು ಮತ್ತಷ್ಟು ಹೆಚ್ಚಿಸಲಿದೆ. ಜೈ ಹಿಂದ್ ಎಂದು ಶಾಸ್ತ್ರಿ ಟ್ವೀಟಿಸಿದ್ದಾರೆ