×
Ad

ಕಡಬ ಕೈಕಂಬದಲ್ಲಿ ಬಸ್ ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯ

Update: 2021-02-01 12:35 IST

ಕಡಬ, ಫೆ.1: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್‌ ನಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ.

ಗಾಯಾಳುವನ್ನು ಬೆಂಗಳೂರು ಮೂಲದ ಟೂರಿಸ್ಟ್ ವಾಹನವೊಂದರ ಚಾಲಕ ಭೂತೇಶ್ ಪಿ.ಜೆ. ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆಯೆನ್ನಲಾಗಿದೆ.

ಭೂತೇಶ್ ತನ್ನ ವಾಹನವನ್ನು ಕೈಕಂಬ ಜಂಕ್ಷನ್ ನಲ್ಲಿ ನಿಲ್ಲಿಸಿ ಅಂಗಡಿಯಿಂದ ಬಾಟಲ್ ನೀರು ತರಲೆಂದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿರುವ ಭೂತೇಶ್ ರನ್ನು ತಕ್ಷಣ ಸಾರ್ವಜನಿಕರ ಸಹಕಾರದಿಂದ 108 ಆ್ಯಂಬುಲೆನ್ಸ್ ನಲ್ಲಿ ಕಡಬ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News