×
Ad

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಆಡಳಿತ: ಲಕ್ಷ್ಮಣ ಸವದಿ

Update: 2021-02-01 18:21 IST

ಉಡುಪಿ, ಫೆ.1: ಬಿಜೆಪಿ ಕಾರ್ಯಕರ್ತರ ಆಧಾರದಲ್ಲಿ ನಿಂತಿರುವ ಪಕ್ಷ. ಕಾರ್ಯಕರ್ತರ ಶ್ರಮದಿಂದಾಗಿ ಬಿಜೆಪಿ ಇಂದು ಸ್ವತಂತ್ರವಾಗಿ ಆಡಳಿತ ನಡೆಸು ತ್ತಿದೆ. ಗ್ರಾಮೀಣ ಮಟ್ಟ, ಬೂತ್ ಮಟ್ಟದಲ್ಲಿಯೂ ಪಕ್ಷ ಗಟ್ಟಿಯಾಗಬೇಕು. ಅದು ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಸಾಬೀತಾ ಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕಡಿಯಾಳಿಯಲ್ಲಿರುವ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಗೆ ರವಿವಾರ ಭೇಟಿ ನೀಡಿದ ಅವರು ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡು ತ್ತಿದ್ದರು. ಬಿಜೆಪಿ ಕಾರ್ಯಕರ್ತರ ಸಲಹೆ-ಸೂಚನೆಗಳನ್ನು ಪಡೆದು ಭವಿಷ್ಯದಲ್ಲಿ ಅದನ್ನು ಸರಕಾರದ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಅಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು. ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ ಕಲ್ಮಾಡಿ ಉಪಸ್ಥಿತರಿದ್ದರು.

ನಗರ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸ್ವಾಗತಿಸಿ ದರು. ನಗರ ಪ್ರಧಾನ ಕಾರ್ಯದರ್ಶಿ ಗಿರೀಶ್ ಅಂಚನ್ ಕಾರ್ಯಕ್ರಮ ನಿರೂ ಪಿಸಿದರು. ರಶ್ಮಿತಾ ಬಾಲಕೃಷ್ಣ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News