ಕೋವಿಡ್ ಸುರಕ್ಷತಾ ಕ್ರಮಗಳ ಬಗ್ಗೆ ಮಕ್ಕಳೊಂದಿಗೆ ಸಂವಾದ
Update: 2021-02-01 18:22 IST
ಕುಂದಾಪುರ, ಫೆ.1: ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಗನಾಥ ಪೈ ಇತ್ತೀಚೆಗೆ ನಮ್ಮಭೂಮಿಯ ನಮ್ಮ ನಾಳಂದ ವಿದ್ಯಾಪೀಠದಲ್ಲಿ ಆರೋಗ್ಯ ರಕ್ಷಣೆ ಮತ್ತು ಕೋವಿಡ್-19 ಸುರಕ್ಷತಾ ಕ್ರಮಗಳ ಬಗ್ಗೆ ವುಕ್ಕಳೊಂದಿಗೆ ಸಂವಾದ ನಡೆಸಿದರು.
ಮಕ್ಕಳಿಗೆ ತಮ್ಮ ವೈಯುಕ್ತಿಕ ಸ್ವಚ್ಛತೆ, ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ನಿತ್ಯ ಜೀವನದಲ್ಲಿ ಅನುಸರಿಸುವುದು, ಮನಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು, ದೈನಂದಿನ ಆಹಾರ ಕ್ರಮದ ಬಗ್ಗೆ ಮತ್ತು ಮಾದಕವಸ್ತುಗಳ ಸೇವನೆ ಹಾಗೂ ಅದರಿಂದಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ವಿಷಯಗಳನ್ನು ಹಂಚಿಕೊಂಡರು. ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ನಮ್ಮ ಭೂಮಿಯ ಮಕ್ಕಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.