×
Ad

ಮರ್ಕಝುಲ್ ಹುದಾ ಮಹಿಳಾ ಕಾಲೇಜ್‍ನಲ್ಲಿ 'ಎಕ್ಸಲೆಂಟ್ ಮೀಟ್'

Update: 2021-02-01 19:18 IST

ಪುತ್ತೂರು: ಹೆಣ್ಣು ಮಕ್ಕಳ ಸರ್ವತೋಮುಖ ಬೆಳವಣಿಗೆ ಪ್ರವಾದಿಯವರ ಚಿಂತನೆಯಾಗಿತ್ತು. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡುವುದು ಅಗತ್ಯವಾಗಿದ್ದು, ಹೆಣ್ಣು ಮಕ್ಕಳು ಶಿಕ್ಷಣ ಪಡೆದಲ್ಲಿ ಇಡೀ ಕುಟುಂಬ ಬೆಳವಣಿಗೆ ಹೊಂದಲು ಸಾಧ್ಯ ಎಂದು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಂಎಸ್‍ಎಂ ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್ ತಿಳಿಸಿದರು. 

ಅವರು ರವಿವಾರ ಸಂಜೆ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್ ವಠಾರದಲ್ಲಿ ನಡೆದ `ಎಕ್ಸಲೆಂಟ್ ಮೀಟ್' ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುಶಿಕ್ಷಿತ ಮಹಿಳೆಯಿಂದ ಸುರಕ್ಷಿತ ಸಮಾಜ ನಿರ್ಮಾಣವಾಗಲಿದೆ. ಈ ನಿಟ್ಟಿನಲ್ಲಿ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್‍ನಲ್ಲಿ ಉನ್ನತ ಮಟ್ಟದ ವಿದ್ವಾಂಸರ ಸಾರಥ್ಯದಲ್ಲಿ ಮಹಿಳೆಯರಿಗೆ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸದ ಜೊತೆಗೆ  ನೈತಿಕ ಶಿಕ್ಷಣ ಮತ್ತು ಆಧ್ಯಾತ್ಮಿಕ ತರಬೇತಿಯನ್ನು ನೀಡಿ ಮಾದರಿ ಪ್ರಜ್ಞಾವಂತ ಮಹಿಳೆಯರನ್ನಾಗಿ ರೂಪಿಸಲಾಗುತ್ತಿದೆ. ಧರ್ಮನಿಷ್ಠ ಪೀಳಿಗೆಯ ನಿರ್ಮಾಣವೇ ಸಂಸ್ಥೆಯ ಗುರಿಯಾಗಿದೆ.

ಕಳೆದ 20 ವರ್ಷಗಳಿಂದ ಈ ಸಂಸ್ಥೆಯು ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸುಮಾರು 2500ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ವನ್ನು ಪೂರೈಸಿಕೊಂಡು ಉತ್ತಮವಾದ ಕೌಟುಂಬಿಕ ಬದುಕು ನಡೆಸುತ್ತಿದ್ದಾರೆ. ಇದೀಗ ಇಲ್ಲಿ ಕಲಿಕೆಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಕಟ್ಟಡ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕಾಗಿದೆ. ಇದಕ್ಕಾಗಿ ಸುಮಾರು ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇಲ್ಲಿನ ಎಲ್ಲಾ ಅಭಿವೃದ್ಧಿ ಕೆಲಸಗಳು ಸಹೃದಯಿ ದಾನಿಗಳ ನೆರವಿನಿಂದಲೇ ನಡೆಯುತ್ತಿದ್ದು, ನೂತನ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ದಾನಿಗಳ ನೆರವು ಬೇಕಾಗಿದೆ. ಜನರ ಸಹಭಾಗಿತ್ವದಿಂದಲೇ ಈ ಸಂಸ್ಥೆ ಮುಂದುವರಿಯುತ್ತಿದೆ ಎಂದರು.

ಅನಿವಾಸಿ ಉದ್ಯಮಿ ಇಬ್ರಾಹಿಂ ಹಾಜಿ ಬ್ರೈಟ್ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಸಯ್ಯದ್ ಹಾದೀ ಇಸ್ಮಾಯಿಲ್ ತಂಙಳ್ ಅಧ್ಯಕ್ಷತೆ ವಹಿಸಿ ದ್ದರು. ಉದ್ಯಮಿ ಝಿಯಾದ್ ಮಂಗಳೂರು, ಹನೀಫ್ ಪುತ್ತೂರು, ಇಕ್ಬಾಲ್ ಬಾಳಿಲ, ಆಶಿಕ್ ಕುಕ್ಕಾಜೆ, ಮತ್ತಿತರರು ಅನಿಸಿಕೆ, ಅಭಿಪ್ರಾಯ ವ್ಯಕ್ತ ಪಡಿಸಿದರು.

ಸನದುದಾನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಮಹಮ್ಮದ್ ಕುಕ್ಕುವಳ್ಳಿ ಸ್ವಾಗತಿಸಿದರು. ಮರ್ಕಝುಲ್ ಹುದಾ ಮಹಿಳಾ ಕಾಲೇಜ್‍ನ ಕಾರ್ಯಾ ಧ್ಯಕ್ಷ ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿ ವಂದಿಸಿದರು.  ಸ್ವಾಗತ ಸಮಿತಿ ಸಹ ಸಂಚಾಲಕ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News