×
Ad

ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ನವೀಕರಣ

Update: 2021-02-01 20:22 IST

ಉಡುಪಿ, ಫೆ.1:ಉಡುಪಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಗಳಲ್ಲಿ ಈಗಾಗಲೇ ಒಟ್ಟು 959 ನವೀಕರಣ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

ಪ್ರಸ್ತುತ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಹೊಸ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 10 ಕೊನೆಯ ದಿನವಾಗಿರುತ್ತದೆ. ನವೀಕರಣಗೊಳ್ಳುವ ಅರ್ಹ ವಿದ್ಯಾರ್ಥಿಗಳು ಈಗಾಗಲೇ ಪ್ರವೇಶ ಪಡೆಯದೇ ಇದ್ದರೆ ಅಂತಹ ವಿದ್ಯಾರ್ಥಿ ಗಳಿಗೆ ಪ್ರವೇಶ ಪಡೆಯಲು ಫೆ.7 ಕೊನೆಯ ದಿನವಾಗಿರುತ್ತದೆ. ನಂತರ ಬರುವ ನವೀಕರಣ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ವಿರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News