ಗುಣಮಟ್ಟದ ಮೀನು, ಮೀನಿನ ಉತ್ಪನ್ನ ಪೂರೈಕೆ: ಸಚಿವ ಎಸ್.ಅಂಗಾರ

Update: 2021-02-01 16:37 GMT

ಬೆಂಗಳೂರು, ಫೆ.1: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ ಹಾಗೂ ತದಡಿ ಮೀನುಗಾರಿಕೆ ಬಂದರಿನಲ್ಲಿ ಪರ್ಸೀನ್ ಬೋಟುಗಳು ಹಿಡಿದು ತಂದ ಮೀನನ್ನು ನಿಗಮದ ಮುಖಾಂತರ ಮಾರಾಟ ಮಾಡಿ ಮೀನುಗಾರರಿಗೆ ಉತ್ತಮ ಬೆಲೆಯನ್ನು ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಭರವಸೆ ನೀಡಿದ್ದಾರೆ.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿಆಡಳಿತ ಪಕ್ಷದ ಸದಸ್ಯ ಉಮಾನಾಥ್ ಎ. ಕೋಟ್ಯಾನ್ ಕೇಳಿದ ಪ್ರಶ್ನಗೆ ಉತ್ತರಿಸಿದ ಅವರು, ಮೀನುಗಾರಿಕೆ ಬಂದರುಗಳಲ್ಲಿ ಒಟ್ಟು ದಿನವೊಂದಕ್ಕೆ 220 ಟನ್ ಸಾಮರ್ಥ್ಯದ ಮಂಜುಗಡ್ಡೆ ಸ್ಥಾವರಗಳನ್ನು ನಿರ್ಮಿಸಿ ಮೀನುಗಾರಿಕೆಗೆ ಮಂಜುಗಡ್ಡೆಯನ್ನು ಸರಬರಾಜು ಮಾಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 21 ಹವಾನಿಯಂತ್ರಿತ ಮೀನು ಮಾರಾಟ ಮಳಿಗೆ, ಮತ್ಸ್ಯದರ್ಶಿನಿ ಉಪಾಹಾರ ಗೃಹಗಳನ್ನು ಸ್ಥಾಪಿಸಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಮೀನು ಹಾಗೂ ಮೀನಿನ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದೆ ಎಂದ ಅವರು, ಒಳನಾಡು ಪ್ರದೇಶಕ್ಕೆ ತಾಜಾ ಹಾಗೂ ಶೀಥಲೀಕೃತ ಮೀನು ಸರಬರಾಜು ಮಾಡಲು ಶೀಥಲ ಸರಪಣಿಯನ್ನು ಸ್ಥಾಪಿಸಿದೆ. ಮಂಗಳೂರಿನಲ್ಲಿ ಯೂರೋಪಿಯನ್ ಒಕ್ಕೂಟ ರಾಷ್ಟ್ರಗಳಿಗೆ ಮೀನು ರಫ್ತು ಮಾಡುವ ಪರವಾನಿಗೆ ಹೊಂದಿರುವ ಆಧುನಿಕ ಮೀನು ಸಂಸ್ಕರಣಾ ಸ್ಥಾವರವನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News