ಮೈಸೂರು, ಚಾಮರಾಜನಗರ ಜಿಲ್ಲೆಗಳ 67 ಸಾವಿರ ರೈತರ ಸಾಲ ಮನ್ನಾ: ಎಸ್.ಟಿ.ಸೋಮಶೇಖರ್

Update: 2021-02-02 12:30 GMT

ಬೆಂಗಳೂರು, ಫೆ.2: ಒಂದು ಲಕ್ಷದವರೆಗಿನ ಸಾಲ ಮನ್ನಾ ಯೋಜನೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸಹಕಾರ ಸಂಘಗಳಲ್ಲಿ ಕ್ರಮವಾಗಿ 67 ಸಾವಿರ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಆರ್.ಧರ್ಮಸೇನ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಮೈಸೂರು, ಚಾಮರಾಜನಗರ ಜಿಲ್ಲೆಯ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಹಾಗೂ ಶೇ.3ರ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಬೆಳೆ ಸಾಲದಲ್ಲಿ ಒಂದು ಕುಟುಂಬಕ್ಕೆ ಗರಿಷ್ಠ 1 ಲಕ್ಷ ಮಾತ್ರ ಮನ್ನಾ ಆಗುತ್ತದೆ ಎಂದು ತಿಳಿಸಿದರು.

ಶೇ.3ರ ಬಡ್ಡಿದರದಲ್ಲಿ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ನೀಡುವ ಯೋಜನೆಯಡಿ ಕುಟುಂಬಕ್ಕೆ ಗರಿಷ್ಠ 10 ಲಕ್ಷ ರೂ.ವರೆಗೆ ಸಾಲದ ಮಿತಿಯನ್ನು ನಿಗದಿಪಡಿಸಲಾಗಿದೆ. ಗನಿಷ್ಠ ಸಾಲದ ಮಿತಿ ನಿಗದಿಯಾಗಿಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News