ಮೇ ತಿಂಗಳಿನಲ್ಲಿ ಯುಜಿಸಿ-ನೆಟ್ ಪರೀಕ್ಷೆ

Update: 2021-02-02 14:39 GMT

ಹೊಸದಿಲ್ಲಿ,ಫೆ.2: ಸಹಾಯಕ ಪ್ರೊಫೆಸರ್‌ಗಳ ಹುದ್ದೆಗಳಿಗಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್)ಯನ್ನು ಮೇ ತಿಂಗಳಿನಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ ಪೋಖ್ರಿಯಾಲ್ ನಿಷಾಂಕ್ ಅವರು ಮಂಗಳವಾರ ಇಲ್ಲಿ ಪ್ರಕಟಿಸಿದರು.

‘ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಯು ಜ್ಯೂನಿಯರ್ ಫೆಲೊಶಿಪ್ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗಾಗಿ ಮೇ 2ರಿಂದ 7,10ರಿಂದ 12 ಹಾಗೂ 14 ಮತ್ತು 17ರಂದು ಯುಜಿಸಿ-ನೆಟ್ ಪರೀಕ್ಷೆಗಳನ್ನು ನಡೆಸಲಿದೆ. ಎಲ್ಲ ಪರೀಕ್ಷಾರ್ಥಿಗಳಿಗೆ ಶುಭ ಹಾರೈಕೆಗಳು ’ಎಂದು ಪೋಖ್ರಿಯಾಲ್ ಟ್ವೀಟಿಸಿದ್ದಾರೆ. ಈ ಸಂಬಂಧ ಶಿಕ್ಷಣ ಸಚಿವಾಲಯದಡಿ ಸ್ವಾಯತ್ತ ಸಂಸ್ಥೆಯಾಗಿರುವ ಎನ್‌ಟಿಎ ಅಧಿಸೂಚನೆಯನ್ನು ಹೊರಡಿಸಿದ್ದು,ಪರೀಕ್ಷೆಯು ಎರಡು ಪೇಪರ್‌ಗಳನ್ನು ಒಳಗೊಂಡಿರುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷಾ ವಿಧಾನದ ಮೂಲಕವೇ ಪರೀಕ್ಷೆಯನ್ನು ನಡೆಸಲಾಗುವುದು. ಅರ್ಜಿಗಳನ್ನು ಸಲ್ಲಿಸಲು ಮಾ.2 ಕೊನೆಯ ದಿನಾಂಕವಾಗಿದೆ ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News