ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಮುಂದೂಡಲಾಗಿದ್ದ ಎಫ್‍ಡಿಎ ಪರೀಕ್ಷೆ ಫೆ.28ಕ್ಕೆ ನಿಗದಿ

Update: 2021-02-02 15:25 GMT

ಬೆಂಗಳೂರು, ಫೆ.2: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಫೆ.28ಕ್ಕೆ ನಿಗದಿ ಪಡಿಸಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಲೋಕಸೇವಾ ಆಯೋಗವು, ಈ ಹಿಂದೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯನ್ನು ಜ.24ರಂದು ನಡೆಸಬೇಕಿತ್ತು. ಆದರೆ, ಕೊನೆಯ ಹಂತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಯಿತು. ಇದೇ ಪರೀಕ್ಷೆ ಫೆ.28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಸತ್ಯವತಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News