×
Ad

ಶೃಂಗೇರಿ ಬಾಲಕಿಯ ಮೇಲಿನ ಬಲಾತ್ಕಾರ ಖಂಡನೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ: ಶೋಭಾ ಕರಂದ್ಲಾಜೆ

Update: 2021-02-03 18:54 IST

ಉಡುಪಿ, ಫೆ.3: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯ. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ತಪ್ಪಿತಸ್ತರನ್ನು ಬಂಧಿಸಲು ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ಗಳನ್ನು ಕೊಟ್ಟಿದ್ದೇನೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಯ ಬಳಿಕ ಪ್ರಥಮ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಸಂಸದೆ, ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಕರೆತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎಂದು ಕರೆಯಲ್ಪಡುವ ಗೀತಾಳನ್ನು ಕೂಡ ಬಂಧಿಸಿ ವಿಚಾರಿಸಲಾಗುತ್ತಿದೆ ಎಂದವರು ಹೇಳಿದ್ದಾರೆ.

ಎಸೆಸೆಲ್ಸಿ ಓದುತ್ತಿರುವ ಹುಡುಗಿ ತನ್ನ ಊರಿನಿಂದ ಇಲ್ಲಿಗೆ ಯಾಕೆ ಬಂದಳು ? ಯಾಕೆ ಅವಳನ್ನು ಚಿಕ್ಕಮ್ಮ ದುರುಪಯೋಗ ಮಾಡಿದಳು ? ಇದೇ ರೀತಿ ಇನ್ಯಾವ ಹುಡುಗಿಯ ಜೊತೆ ಗೀತಾ ಸಂಪರ್ಕ ಬೆಳೆಸಿದ್ದಾಳೆ ಎಂಬುದರ ಕುರಿತು ಕೂಡ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ.
ಪ್ರಕರಣ ಗಂಭೀರವಾಗಿದ್ದು, ಅಪ್ರಾಪ್ತ ಬಾಲಕಿಯ ಭವಿಷ್ಯದ ವಿಚಾರವಾಗಿ ರುವುದರಿಂದ, ಮಾಧ್ಯಮಕ್ಕೆ ಬಹಿರಂಗ ಹೇಳಿಕೆ ನೀಡುವುದು ಸರಿ ಯಲ್ಲ ಎಂಬುದು ನನ್ನ ಅಭಿಪ್ರಾಯ. ಪ್ರತಿನಿತ್ಯ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಈ ಕೇಸನ್ನು ನಿಗಾ ವಹಿಸಿ ಗಮನಿಸಲಾಗುತ್ತಿದೆ ಎಂದವರು ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News