ದ.ಕ.ಜಿಲ್ಲೆ : 61 ಮಂದಿಗೆ ಕೊರೋನ ಪಾಸಿಟಿವ್
Update: 2021-02-03 20:19 IST
ಮಂಗಳೂರು, ಫೆ.3: ದ.ಕ. ಜಿಲ್ಲೆಯಲ್ಲಿ ಬುಧವಾರ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ ದಿಢೀರನೆ ಏರಿಕೆಯಾಗಿದ್ದು, 61 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇವರಲ್ಲಿ ಬಹುತೇಕರು ಉಳ್ಳಾಲ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. 65 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,888 ಸೋಂಕಿತರ ಪೈಕಿ 32,867 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 740 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 281 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 5,28,243 ಮಂದಿಯ ಸ್ಯಾಂಪಲ್ ಪರೀಕ್ಷಿಸಲಾಗಿದೆ. ಇದರಲ್ಲಿ 4,94,355 ನೆಗೆಟಿವ್ ವರದಿಗಳು ಬಂದಿದ್ದು, ಉಳಿದದ್ದು ಪಾಸಿಟಿವ್ ವರದಿಗಳು.
ಜಿಲ್ಲೆಯಲ್ಲಿ 29,687 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 30,88,850 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.