×
Ad

ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2021-02-03 20:55 IST

ಉಡುಪಿ, ಫೆ.3: ಉಡುಪಿ ತಾಲೂಕಿನ ಮಣಿಪಾಲದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತ ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಪ್ರಸ್ತುತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು.

ಅರ್ಜಿ ಸಲ್ಲಿಸಲು ಫೆ.10 ಕೊನೆಯ ದಿನವಾಗಿದೆ. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, 2019-20ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್‌ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಪಂನಿಂದ ಪಡೆದ ದೂರದ ಪ್ರಮಾಣ ಪತ್ರ, ಎರಡು ಫೋಟೊಗಳನ್ನು ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ ದೂರವಾಣಿ ಸಂಖ್ಯೆ: 0820-2574596 ಅಥವಾ 0820-2573596, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಾರ್ಕಳ ದೂ.ಸಂಖ್ಯೆ: 08258-231101, ಕುಂದಾಪುರ ದೂ.ಸಂಖ್ಯೆ: 08254-230370 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News