×
Ad

ಸಗಟು ಖರೀದಿ ಯೋಜನೆಯಡಿ ಪುಸ್ತಕ ಖರೀದಿಗೆ ಅರ್ಜಿ ಆಹ್ವಾನ

Update: 2021-02-03 20:57 IST

ಉಡುಪಿ, ಫೆ.3: ಕನ್ನಡ ಪುಸ್ತಕ ಪ್ರಾಧಿಕಾರವು 2017ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆ.27 ಕೊನೆಯ ದಿನ. ಅರ್ಜಿ ನಮೂನೆಯನ್ನು ಪ್ರಾಧಿಕಾರದ ವೆಬ್‌ಸೈಟ್- www.kannadapustakapradhikara.com - ಅಥವಾ ಬೆಂಗಳೂರಿನಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದು.

ಪುಸ್ತಕದ ಎರಡು ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-22484516 / 22017704ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News