×
Ad

ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

Update: 2021-02-03 20:59 IST

ಉಡುಪಿ, ಫೆ.3: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020ರ ಜನವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು/ಮುದ್ರಕರು/ ಕಲಾವಿದರು/ ಲೇಖಕರುಗಳು ಫೆಬ್ರವರಿ 20ರೊಳಗೆ ಸ್ವಯಂ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗೂರು ಈ ವಿಳಾಸಕ್ಕೆ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ -www.kannadapustakapradhikara.com- ದೂರವಾಣಿ ಸಂಖ್ಯೆ: 080- 22484516/22107704ನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾ ಧಿಕಾರಿ ಕೆ.ಬಿ.ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News