×
Ad

ಪೊರಾಡು ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಹುಲಿ

Update: 2021-02-03 21:34 IST

ಮಡಿಕೇರಿ,ಫೆ.3 : ಬಿರುನಾಣಿ ಗ್ರಾ.ಪಂ ವ್ಯಾಪ್ತಿಯ ಪೊರಾಡು ಗ್ರಾಮದ ಕಾಫಿ ತೋಟದಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕವನ್ನು ಸೃಷ್ಟಿಸಿದೆ. 

ಕಾರ್ಮಿಕರು ಕಾಫಿ ಕೊಯ್ಲು ಮಾಡುತ್ತಿದ್ದ ಸಂದರ್ಭ ಬೆಳೆಗಾರ ಬಲ್ಯಮಿದೇರಿರ ವಿಜಯಪ್ರಸಾದ್ ಅವರ ಪುತ್ರ ಪ್ರತಿಕ್ ಪೊನ್ನಣ್ಣಗೆ ಐದು ಅಡಿ ಅಂತರದಲ್ಲೇ ಹುಲಿ ಮಲಗಿರುವುದು ಕಂಡು ಬಂದಿದೆ. ಗಾಬರಿಯಾದ ಎಲ್ಲರೂ ಸ್ಥಳದಿಂದ ಓಡಿ ಹೋಗಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಅರಣ್ಯ ಸಿಬ್ಬಂದಿಗಳು ಹುಲಿಯನ್ನು ಕಾಡಿಗಟ್ಟುವ ಪ್ರಯತ್ನ ಮಾಡಿದರು.

ಕೂಟಿಯಾಲ ಅರಣ್ಯ ವಿಭಾಗದ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ನಂದೀಶ್, ಮಿಥುನ್, ರೋಷನ್ ಅವರುಗಳು ನಡೆಸಿದ ಕಾರ್ಯಾಚರಣೆಗೆ ಗ್ರಾಮಸ್ಥರು ಸಹಕಾರ ನೀಡಿದರು. ಹುಲಿ ಸೇರಿದಂತೆ ವನ್ಯಜೀವಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News