ಮಾದಕ ದ್ರವ್ಯ ಸೇವನೆ: ಆರೋಪಿ ಸೆರೆ
Update: 2021-02-03 21:57 IST
ಮಂಗಳೂರು, ಫೆ.3: ನಗರದ ವೆಲೆನ್ಸಿಯ ರಸ್ತೆಯಲ್ಲಿ ಗಾಂಜಾ ಸೇವನೆ ಆರೋಪದಲ್ಲಿ ಯುವಕನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಅಯ್ಮನ್ (19) ಬಂಧಿತ ಆರೋಪಿ.
ಇನ್‌ಸ್ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಯುವಕ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಯಾಗುವಂತೆ ವರ್ತಿಸುತ್ತಿದ್ದ ಎನ್ನಲಾಗಿದ್ದು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ನಾರ್ಕೋಟಿಕ್ ಮತ್ತು ಆರ್ಥಿಕ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ