ರೈತ ಹೋರಾಟವನ್ನು ಬೆಂಬಲಿಸಿದ ಗ್ರೆಟಾ ಥನ್ಬರ್ಗ್ ವಿರುದ್ಧ ಪ್ರಕರಣ ದಾಖಲಿಸಿದ ದಿಲ್ಲಿ ಪೊಲೀಸರು
Update: 2021-02-04 16:35 IST
ಹೊಸದಿಲ್ಲಿ: ಕೇಂದ್ರ ಸರಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಹಲವಾರು ಅಂತಾರಾಷ್ಟ್ರೀಯ ಗಣ್ಯರು ಟ್ವೀಟ್ ಮಾಡಿದ್ದರು. ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಕೂಡಾ ಈ ಕುರಿತಾದಂತೆ ಟ್ವೀಟ್ ಮಾಡಿದ್ದರು. ಇದೀಗ ಅವರ ವಿರುದ್ಧ 'ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುವುದು' ಪ್ರಕರಣವನ್ನು ದಿಲ್ಲಿ ಪೊಲೀಸರು ದಾಖಲಿಸಿದ್ದಾರೆಂದು ತಿಳಿದು ಬಂದಿದೆ.
ರೈತರ ಹೋರಾಟವನ್ನು ಬೆಂಬಲಿಸಿ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಮಾಡಿದ್ದ ಟ್ವೀಟ್ ನ ಬೆನ್ನಲ್ಲೇ ಗ್ರೆಟಾ ಟ್ವೀಟ್ ಮಾಡಿ ಹೋರಾಟದಲ್ಲಿ ನಿರತರಾಗಿರುವ ರೈತರಿಗೆ ಬೆಂಬಲ ಸೂಚಿಸಿದ್ದರು. ಗ್ರೆಟಾ ಟ್ವೀಟ್ ಮಾಡಿದ ಬಳಿಕ ೀ ಪ್ರಕರಣವು ವಿಶ್ವಾದ್ಯಂತ ವ್ಯಾಪಕ ಪ್ರಚಾರ ಪಡೆದಿತ್ತು.
We stand in solidarity with the #FarmersProtest in India.
— Greta Thunberg (@GretaThunberg) February 2, 2021
https://t.co/tqvR0oHgo0