×
Ad

ನಾವು ತಂಡದ ಸಭೆಯಲ್ಲಿ ರೈತರ ಪ್ರತಿಭಟನೆಯ ಕುರಿತು ಮಾತನಾಡಿದ್ದೇವೆ: ವಿರಾಟ್‌ ಕೊಹ್ಲಿ

Update: 2021-02-04 17:19 IST

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರುವಾರ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯ ಕುರಿತು ಮಾತನಾಡಿದ್ದಾರೆ ಎಂದು ndtv.com ವರದಿಯು ತಿಳಿಸಿದೆ. ತಮ್ಮ ತಂಡದ ಸಭೆಯಲ್ಲಿ ಈ ವಿಷಯವು ಚರ್ಚೆಗೆ ಬಂದಿದ್ದು, ಅಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಕೊಹ್ಲಿ ಹೇಳಿಕೆ ನೀಡಿದ್ದಾರೆ.

ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಮುಂಚಿತವಾಗಿ ಮಾಧ್ಯಮಗಳೊಂದಿಗೆ ಆನ್‌ಲೈನ್‌ನಲ್ಲಿ ಮಾತನಾಡಿದ ನಾಯಕ ಕೊಹ್ಲಿ, ಈ ವಿಷಯದ ಬಗ್ಗೆ ನಡೆದ "ಸಂಕ್ಷಿಪ್ತ" ಸಂಭಾಷಣೆಯ ವಿವರಗಳನ್ನು ಬಹಿರಂಗಪಡಿಸಲಿಲ್ಲ.

"ನಾವು ತಂಡದ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಿದ್ದೇವೆ, ಪ್ರತಿಯೊಬ್ಬರೂ ರೈತರ ಪ್ರತಿಭಟನೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು," ಎಂದು ಕೊಹ್ಲಿ ಎರಡು ತಿಂಗಳಿನಿಂದ ನಡೆಯುತ್ತಿರುವ ಆಂದೋಲನದ ಬಗ್ಗೆ ಪ್ರಶ್ನಿಸಿದಾಗ ಹೇಳಿದರು.

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಮತ್ತು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಅವರು ರೈತರ ಪ್ರತಿಭಟನೆ ಮತ್ತು ಅದನ್ನು ವಿಶ್ವ ವೇದಿಕೆಯಲ್ಲಿ ನಿಗ್ರಹಿಸಲು ಅಧಿಕಾರಿಗಳು ಮಾಡಿದ ಪ್ರಯತ್ನಗಳನ್ನು ಎತ್ತಿ ತೋರಿಸಿದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರ ಬೆಂಬಲಿತ ಟ್ವೀಟ್‌ ಗಳನ್ನು ಮಾಡಿದ್ದ ಭಾರತೀಯ ಪ್ರಸಿದ್ಧ ವ್ಯಕ್ತಿಗಳಲ್ಲಿ ವಿರಾಟ್ ಕೊಹ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News