ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೀನುಗಾರರಿಂದ ಸಿಎಂಗೆ ಮನವಿ
ಉಡುಪಿ, ಫೆ.4: ಮಲ್ಪೆಮೀನುಗಾರರ ಸಂಘದ ಪದಾಧಿಕಾರಿಗಳು ಹಾಗೂ ಮೀನುಗಾರ ಮುಖಂಡರ ನಿಯೋಗ ಇಂದು ಬೆಂಗಳೂರಿನ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮೀನುಗಾರರ ಪ್ರಮುಖ ಬೇಡಿಕೆಗಳ ಈಡೇರಿಸುವಂತೆ ಮನವಿ ಸಲ್ಲಿಸಿದರು.
ಯಾಂತ್ರಿಕ ಮೀನುಗಾರಿಕಾ ದೋಣಿಗಳಿಗೆ ಮಾರಾಟ ತೆರಿಗೆ ರಹಿತ ಡೀಸೆಲ್ ಡೆಲಿವರಿ ಪಾಯಿಂಟ್ನಲ್ಲಿ ವಿತರಿಸಬೇಕು. ಟೆಗ್ಮಾ ಶಿಫ್ ಯಾರ್ಡ್ ಗುತ್ತಿಗೆ ಅವಧಿ ವಿಸ್ತರಿಸಬಾರದು. ಬಂದರಿನ ಬೇಸಿನ್ ಒಳಗೆ (ಡ್ರೆಜಿಂಗ್) ಹೂಳೆತ್ತುವ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಯನ್ನು ನಿಯೋಗ ಒತ್ತಾಯಿಸಿತು. ಮನವಿಗೆ ಸಕಾ ರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ, ಇವುಗಳನ್ನು ಬಜೆಟ್ನಲ್ಲಿ ಪರಿಗಣಿ ಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮೀನುಗಾರರ ಮುಖಂಡರಾದ ಸತೀಶ್ ಕುಂದರ್, ದಯಾನಂದ ಸುವರ್ಣ, ವಿಠಲ ಕರ್ಕೇರ, ಕರುಣಾಕರ ಸಾಲ್ಯಾನ್, ನಾಗರಾಜ ಸುವರ್ಣ, ಸುಭಾಷ್ ಮೆಂಡನ್, ಕಿಶೋರ್ ಸುವರ್ಣ, ಮಹೇಶ್ ಸುವರ್ಣ, ನಾರಾಯಣ ಕರ್ಕೇರ, ರವಿರಾಜ್ ಸುವರ್ಣ ಉಪಸ್ಥಿತರಿದ್ದರು.