×
Ad

ಫೆ.5: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ವೆಲ್ಫೇರ್ ಪಾರ್ಟಿ ಪ್ರತಿಭಟನೆ

Update: 2021-02-04 20:51 IST

ಭಟ್ಕಳ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳು ಬೆಲೆ ಏರಿಕೆ  ವಿರುದ್ಧ ವೆಲ್ಫೇರ್ ಪಾರ್ಟಿ ಆಫ್  ಇಂಡಿಯಾ ಭಟ್ಕಳ ಫೆ.5ರಂದು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಖ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಫೆ.5 ರಂದು  ಬೆಳಿಗ್ಗೆ 10 ಗಂಟೆಯಿಂದ  11 ರ ತನಕ ಸಹಾಯಕ ಆಯುಕ್ತರ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ಪ್ರತಿಭಟನೆಯಲ್ಲಿ ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೆರ್ ಹುಸೈನ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News