ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಅಧಿಕಾರಿಗಳ ನೇಮಕ
Update: 2021-02-04 21:28 IST
ಉಡುಪಿ, ಫೆ.4: ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳ 30 ತಿಂಗಳ ಮೊದಲ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆಗೆ ಚುನಾವಣೆ ನಡೆಸುವ ಸಲುವಾಗಿ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳು ಈಗಾಗಲೇ ಗೊತ್ತುಪಡಿಸಿದ ಮೀಸಲಾತಿ ಯಂತೆ ಆಯಾ ಗ್ರಾಪಂಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.