ವಾರಸುದಾರರಿಗೆ ಸೂಚನೆ
ಉಡುಪಿ, ಫೆ.4: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 50 ವರ್ಷದ ಅಪರಿಚಿತ ವ್ಯಕ್ತಿಯು ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದಾರೆ.
ಅಲ್ಲದೇ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಾಗಿರುವ ಬಸಪ್ಪ (48), ಅಂಬರೀಶ್(40) ಮತ್ತು ರಝಾಕ್ (55) ಎಂಬ ವ್ಯಕ್ತಿಗಳ ಸ್ಥಿತಿ ಚಿಂತಾಜನಕವಾಗಿದೆ. ಇವರೆಲ್ಲರ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555 /9449827833 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಇದರೊಂದಿಗೆ 108 ಅಂಬುಲೆನ್ಸ್‌ನವರು ಒಳರೋಗಿಯಾಗಿ ದಾಖಲಿಸಿದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಸಹ ಚಿಕಿತ್ಸೆ ಫಲಕಾರಿಯಾಗದೇ ಫೆ.3ರಂದು ಮೃತ ಪಟ್ಟಿದ್ದು, ಇವರ ವಾರಸುದಾರರು ಯಾರಾದರೂ ಇದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 0820-2537999 ಅನ್ನು ಸಂಪರ್ಕಿಸುವಂತೆ ಹಾಗೂ ವಾರಸುದಾರರು ಬಾರದಿದ್ದಲ್ಲಿ ಮೃತ ದೇಹವನ್ನು ಕಾನೂನು ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಮಲ್ಪೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.