ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

Update: 2021-02-04 17:15 GMT

ಬೆಂಗಳೂರು, ಫೆ.4: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಲ್ಕು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು. ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದರು.

ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News