ಮ್ಯಾನ್ಮಾರ್‌ನಲ್ಲಿ ಫೇಸ್‌ಬುಕ್ ಸೇವೆಗಳಿಗೆ ನಿರ್ಬಂಧ

Update: 2021-02-04 18:04 GMT

ಯಾಂಗನ್ (ಮ್ಯಾನ್ಮಾರ್), ಫೆ. 4: ಕ್ಷಿಪ್ರಕ್ರಾಂತಿಯ ಮೂಲಕ ಮ್ಯಾನ್ಮಾರ್‌ನ ಆಡಳಿತವನ್ನು ಸೇನೆಯು ತನ್ನ ವಶಕ್ಕೆ ತೆಗೆದುಕೊಂಡ ದಿನಗಳ ಬಳಿಕ, ದೇಶದಲ್ಲಿ ತನ್ನ ಸೇವೆಗಳನ್ನು ನಿರ್ಬಂಧಿಸಲಾಗುತ್ತಿದೆ ಎಂದು ಜಾಗತಿಕ ಸಾಮಾಜಿಕ ಜಾಲತಾಣ ಫೇಸ್‌ಬುಕ್ ಗುರುವಾರ ಹೇಳಿದೆ.

‘‘ಕೆಲವು ಜನರ ಫೇಸ್‌ಬುಕ್ ಚಟುವಟಿಕೆಗಳನ್ನು ನಿರ್ಬಂಧಿಸಲಾಗುತ್ತಿದೆ ಎನ್ನುವುದು ನಮ್ಮ ಗಮನಕ್ಕೆ ಬಂದಿದೆ’’ ಎಂದು ಫೇಸ್‌ಬುಕ್‌ನ ವಕ್ತಾರರೊಬ್ಬರು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

 ‘‘ಮ್ಯಾನ್ಮಾರ್‌ನ ಜನತೆ ತಮ್ಮ ಕುಟುಂಬ ಸದಸ್ಯರೊಂದಿಗೆ ಸಂಪರ್ಕಿಸಲು ಸಾಧ್ಯವಾಗುವಂತೆಹಾಗೂ ಪ್ರಮುಖ ಮಾಹಿತಿಯನ್ನು ಪಡೆಯಲು ಸಾಧ್ಯವಾಗುವಂತೆ ಸಂಪರ್ಕವನ್ನು ಮರುಸ್ಥಾಪಿಸುವಂತೆ ನಾವು ದೇಶದ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ’’ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News