ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ 10 ವರ್ಷ ಜೈಲು

Update: 2021-02-04 18:25 GMT

ಮೈಸೂರು,ಫೆ.4: ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಎಫ್‍ಟಿಎಸ್‍ಸಿ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷಕನಿಗೆ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕಳೆದ ನವೆಂಬರ್ 2016ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಈಗ ತೀರ್ಪು ಹೊರ ಬಿದ್ದಿದ್ದು, ಆರೋಪಿಗೆ 10 ವರ್ಷ ಜೈಲು ಹಾಗೂ 50 ಸಾವಿರ ದಂಡ ವಿಧಿಸಲಾಗಿದೆ.

ಮೈಸೂರಿನ ಹುಲ್ಲಿನ ಬೀದಿಯಲ್ಲಿ ಕೆ.ಎಂ. ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಶಿಕ್ಷಕನೊಬ್ಬ 14ರ ಹರೆಯದ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ ಟಾಪರ್ ಮಾಡುವುದಾಗಿ ಆಮಿಷವೊಡ್ಡಿ ಕೋಚಿಂಗ್ ನೀಡುತ್ತಿದ್ದ. ಈ ವೇಳೆ ಒಂದು ದಿನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ತೀರ್ಪು ಪ್ರಕಟಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ಸೂಕ್ತ ಪರಿಹಾರ ನೀಡಲು ಕೋರ್ಟ್ ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News