ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಫೆ.9ರಂದು ಚುನಾವಣೆ

Update: 2021-02-05 15:51 GMT

ಬೆಂಗಳೂರು, ಫೆ.5: ಪ್ರತಾಪ್‍ಚಂದ್ರಶೆಟ್ಟಿ ರಾಜೀನಾಮೆಯಿಂದ ತೆರವಾಗಿರುವ ಸಭಾಪತಿ ಸ್ಥಾನಕ್ಕೆ ಫೆ.9ರಂದು ಚುನಾವಣೆ ನಡೆಸಲು ರಾಜ್ಯಪಾಲ ವಜುಭಾಯಿ ವಾಲಾ ದಿನಾಂಕ ಪ್ರಕಟಿಸಿದ್ದಾರೆ.

ಸಭಾಪತಿ ಸ್ಥಾನಕ್ಕೆ ನಿನ್ನೆ(ಗುರುವಾರ) ಪ್ರತಾಪ್‍ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ದರು. ಇದರ ಬೆನ್ನೆಲ್ಲೇ ರಾಜ್ಯಪಾಲರು, ಚುನಾವಣಾ ದಿನಾಂಕವನ್ನು ನಿಗದಿ ಪಡಿಸಿದ್ದಾರೆ. ಫೆ.8ಕ್ಕೆ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದು ಹಾಗೂ ಫೆ.9ರಂದು ಚುನಾವಣೆ ನಡೆಸಲು ಆದೇಶಿಸಿ ಪ್ರಕಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News