ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಸಮಗ್ರ ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಿಎಂ ಸೂಚನೆ

Update: 2021-02-05 17:09 GMT

ಬೆಂಗಳೂರು, ಫೆ. 5: ರಾಜ್ಯದಲ್ಲಿರುವ ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗ 2-ಎ ಮೀಸಲಾತಿಗೆ ಒಳಪಡಿಸುವ ಮನವಿಗೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಲು ಕರ್ನಾಟಕ ರಾಜ್ಯ ಹಿಂದಳಿದ ವರ್ಗಗಳ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಶುಕ್ರವಾರ ಈ ಸಂಬಂಧ ಪತ್ರ ಬರೆದಿರುವ ಅವರು, ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂದವರು ತಮ್ಮ ಸಮಾಜವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತಯ ಔದ್ಯೋಗಿಕವಾಗಿ ಹಿಂದುಳಿದಿದೆ. ಮತ್ತು ಸಮಾಜದ ಕಡುಬಡವರಿಗೆ ತೊಂದರೆಯಾಗಿರುವುದರಿಂದ ತಮ್ಮ ಸಮುದಾಯಕ್ಕೆ ಹಿಂದಳಿದ ವರ್ಗ 2-ಎ ಮೀಸಲಾತಿ ಕಲ್ಪಿಸಲು ಕೋರಿದೆ ಎಂದು ವಿವರಿಸಿದ್ದಾರೆ.

ಸಹಕರಿಸಿ: ಅಧಿವೇಶನದಲ್ಲಿ ನೀಡಿದ ನನ್ನ ಹೇಳಿಕೆಯನ್ನು ಜಯ ಮೃತ್ಯುಂಜಯ ಸ್ವಾಮೀಜಿ ಅಪಾರ್ಥ ಮಾಡಿಕೊಂಡಿದ್ದು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸಂಬಂಧ ಈಗಾಗಲೇ ಇಬ್ಬರು ಸಚಿವರು ಶ್ರೀಗಳ ಜತೆಗೆ ಸಮಾಲೋಚನೆ ನಡೆಸಿದ್ದಾರೆ. ಸಮುದಾಯದ ಒಳತಿಗೆ ನಾನು ಬದ್ಧ. ಇಂತಹ ಗಂಭೀರ ವಿಷಯದಲ್ಲಿ ತರಾತುರಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ, ಸ್ವಾಮೀಜಿಗಳಿಗೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News