×
Ad

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ

Update: 2021-02-07 12:36 IST

‌ಬೆಳ್ತಂಗಡಿ, ಫೆ.7: ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಸಮಾಲೋಚಿಸಿ, ಆಶೀರ್ವಾದ ಪಡೆದರು.

ಕ್ಷೇತ್ರದ ಪರವಾಗಿ ಸಚಿವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರ. ಕಾರ್ಯದರ್ಶಿ ಶ್ರೀನಿವಾಸ ರಾವ್  ಮೊದಲಾದವರು ಉಪಸ್ಥಿತರಿದ್ದರು.

ಇದಾದ ಬಳಿಕ ಅವರು ಧರ್ಮಸ್ಥಳದಿಂದ ನೇತ್ರಾವತಿಯವರೆಗೆ ನೂತನವಾಗಿ ನಿರ್ಮಿಸಿರುವ ಚತುಷ್ಪದ ರಸ್ತೆಯ ಉದ್ಘಾಟನೆ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು. ಶ್ರೀ ಕೇತ್ರದ ವತಿಯಿಂದ ಡಾ.‌ಹೆಗ್ಗಡೆಯವರು ಸಚಿವರನ್ನು ಸನ್ಮಾನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News