×
Ad

ಸಿಸಿಬಿ ತನಿಖಾಧಿಕಾರಿಗಳ ಮುಂದೆ ಹಾಜರಾದ ನಟಿ ರಾಗಿಣಿ

Update: 2021-02-07 18:26 IST

ಬೆಂಗಳೂರು, ಫೆ.7: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಸಿಸಿಬಿ ತನಿಖಾಧಿಕಾರಿಗಳ ಮುಂದೆ ಹಾಜರಾದರು.

ರವಿವಾರ ನಗರದ ಚಾಮರಾಜಪೇಟೆಯ ಸಿಸಿಬಿ ಕೇಂದ್ರ ಕಚೇರಿಗೆ ಹಾಜರಾಗಿ ಪ್ರಕರಣ ಸಂಬಂಧದ ಪುಸ್ತಕದಲ್ಲಿ ಸಹಿ ಹಾಕಿ ಕಾನೂನು ಪ್ರತಿಕ್ರಿಯೆ ಮುಗಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ರಾಗಿಣಿ, ನ್ಯಾಯಾಲಯದ ಸೂಚನೆ ಪ್ರಕಾರ ಸಿಸಿಬಿ ಕಚೇರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಸಹಿ ಹಾಕಿದ್ದೇನೆ. ಪ್ರಕರಣದ ತನಿಖೆಗೆ ಸಹಕಾರ ನೀಡುತ್ತೇನೆ. ಸದ್ಯಕ್ಕೆ ನನ್ನ ಕೆಲಸದಲ್ಲಿ ನಿರತನಾಗಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News