ದ.ಕ. ಜಿಲ್ಲೆ : 30 ಮಂದಿಗೆ ಕೊರೋನ
Update: 2021-02-07 21:22 IST
ಮಂಗಳೂರು, ಫೆ.7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 30 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34 ಸಾವಿರದ ಗಡಿ ದಾಟಿದೆ. 27 ಮಂದಿ ಗುಣಮುಖರಾಗಿದ್ದಾರೆ. ಕೊರೋನದಿಂದ ರವಿವಾರ ಯಾರೂ ಮೃತಪಟ್ಟಿಲ್ಲ.
ಜಿಲ್ಲೆಯಲ್ಲಿ ಇದುವರೆಗೆ 34,005 ಮಂದಿಯಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ ಈಗಾಗಲೇ 32,949 ಮಂದಿ ಗುಣಮುಖ ರಾಗಿದ್ದಾರೆ. ಒಟ್ಟು 740 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 316 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 30,737 ಮಾಸ್ಕ್ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, 31,92,110 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಬುಲೆಟಿನ್‌ನಲ್ಲಿ ಮಾಹಿತಿ ನೀಡಲಾಗಿದೆ.