×
Ad

ಆಟವಾಡುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಬಾಲಕ ಸಾವು

Update: 2021-02-07 22:02 IST

ಮಡಿಕೇರಿ ಫೆ.7: ಬಾಲಕನೋರ್ವ ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಹುಂಡಿ ಗ್ರಾಮದಲ್ಲಿ ನಡೆದಿದೆ.

ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಕಾಲು ಜಾರಿ ಬಿದ್ದ ವಿದ್ಯಾರ್ಥಿ ಹಫೀಝ್ (13) ಎಂಬಾತ ಮೃತಪಟ್ಟಿದ್ದಾನೆ. ಈತ ಚೆನ್ನಯ್ಯನಕೋಟೆಯ ಉಮ್ಮರ್ ಎಂಬುವವರ ಪುತ್ರ.

ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News