ಮಂಗಳೂರು: ತಂಡದಿಂದ ಯುವಕನಿಗೆ ಹಲ್ಲೆ ; ದೂರು ದಾಖಲು
Update: 2021-02-07 23:31 IST
ಮಂಗಳೂರು: ತಂಡವೊಂದು ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ನಗರದ ಪಬ್ಬಾಸ್ ಸಮೀಪ ರವಿವಾರ ರಾತ್ರಿ ನಡೆದಿದೆ.
ಸ್ಥಳೀಯ ನಿವಾಸಿ ದೀಪಕ್ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
ರವಿವಾರ ರಾತ್ರಿ 10ರ ಸುಮಾರಿಗೆ ಎರಡು ಬೈಕ್‌ಗಳಲ್ಲಿ ಬಂದ ತಂಡ ದೀಪಕ್ ರಿಗೆ ಹಲ್ಲೆಗೈದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಘಟನೆ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.