ಐಎಫ್‍ಎಸ್ ಅಧಿಕಾರಿಗಳ ವರ್ಗಾವಣೆ

Update: 2021-02-08 14:51 GMT

ಬೆಂಗಳೂರು, ಫೆ.8: ರಾಜ್ಯ ಸರಕಾರವು ಮೂವರು ಐಎಫ್‍ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ ಅವರನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಪ್ರಚಾರ ಮತ್ತು ಐಟಿಸಿ)ಯಾಗಿ ಮೇಲ್ದರ್ಜೆಗೇರಿಸಲ್ಪಟ್ಟಿರುವ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಸಿಎಎಂಪಿಎ) ಪುನೀತ್ ಪಾಠಕ್ ಅವರನ್ನು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಗೋಗಿ ಅವರನ್ನು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್)ಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News