ರಾಜಸ್ಥಾನ ನಗರಾಡಳಿತ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ

Update: 2021-02-08 16:19 GMT

ಜೈಪುರ, ಫೆ.8: ರಾಜಸ್ಥಾನದ 90 ನಗರಾಡಳಿತ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 48ರಲ್ಲಿ ಗೆಲುವು ಸಾಧಿಸಿದ್ದು ಬಿಜೆಪಿ 37 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

3 ಸಂಸ್ಥೆಗಳ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದರೆ ಎರಡು ಸಂಸ್ಥೆಗಳಿಗೆ ಕಾಂಗ್ರೆಸ್ ಬೆಂಬಲಿತ ಪಕ್ಷೇತರರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ಹೇಳಿವೆ. ನಗರಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಮೇಲುಗೈ ಒದಗಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು. ಇಬ್ಬರು ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕಾಂಗ್ರೆಸ್‌ಗೆ 50ರಲ್ಲಿ ಅಧ್ಯಕ್ಷ ಹುದ್ದೆ ದೊರಕಿದೆ.

ಕಳೆದ ಚುನಾವಣೆಯಲ್ಲಿ 60 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಕೇವಲ 37 ಸ್ಥಾನ ಗಳಿಸಿ ಮುಖಭಂಗಕ್ಕೆ ಒಳಗಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೊತಾಸ್ರ ಹೇಳಿದ್ದಾರೆ. ಪಕ್ಷ ಉತ್ತಮ ಸಾಧನೆ ಮಾಡಿದೆ. 50ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಘೋಷಿಸಿದ್ದ ಕಾಂಗ್ರೆಸ್‌ಗೆ 50 ಸ್ಥಾನ ಗೆಲ್ಲಲೂ ಸಾಧ್ಯವಾಗಿಲ್ಲ. ಪಂಚಾಯತ್ ಚುನಾವಣೆ ಬಳಿಕ ಮತ್ತೊಮ್ಮೆ ಜನತೆ ಗೆಹ್ಲೋಟ್ ಸರಕಾರಕ್ಕೆ ಪಾಠ ಕಲಿಸಿದ್ದಾರೆ. ಮುಂಬರುವ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಎಲ್ಲಾ ಅನುಮಾನಗಳನ್ನೂ ಜನರು ಪರಿಹರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಪ್ರತಿಕ್ರಿಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News