ಜಾಲಿ ಪ.ಪಂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಿಲಾಲ್ ಖಮರಿ

Update: 2021-02-08 16:48 GMT

ಭಟ್ಕಳ : ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಲಾಲ್ ಖಮರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟೂ 20 ಸದಸ್ಯ ಬಲದ ಜಾಲಿ ಪಟ್ಟಣ ಪಂಚಾಯತ್ ನಲ್ಲಿ 11 ಸ್ಥಾಯಿ ಸಮಿತಿಯ ಸದಸ್ಯರಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಲಾಲ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಶಮೀಮ್ ಬಾನು, ಉಪಾಧ್ಯಕ್ಷೆ ಫರ್ಹಾನಾ ಇರ್ಷಾದ್, ಮುಖ್ಯಾಧಿಕಾರಿ ಅಜಯ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News