ಫೆ.4ರ ಅಧಿಸೂಚನೆಯನ್ನು ತಾಂತ್ರಿಕ ಕಾರಣಗಳಿಂದ ಹಿಂದಕ್ಕೆ ಪಡೆದ ಕೆಇಎ
Update: 2021-02-10 23:12 IST
ಬೆಂಗಳೂರು, ಫೆ.10: ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕಾಗಿ ಫೆ.5 ರಿಂದ 11ರವರೆಗೆ ಅರ್ಜಿಯನ್ನು ಆಹ್ವಾನಿಸಿರುವ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಫೆ.4ರ ಅಧಿಸೂಚನೆಯನ್ನು ತಾಂತ್ರಿಕ ಕಾರಣಗಳಿಂದ ಹಿಂಪಡೆಯಲಾಗಿದೆ. ಪರಿಷ್ಕೃತ ಅಧಿಸೂಚನೆಯನ್ನು ಸದ್ಯದಲ್ಲೆ ಪ್ರಕಟಿಸಲಾಗುವುದು ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.