×
Ad

ಟ್ರ್ಯಾಕ್ಟರ್ ಕಳವು ಪ್ರಕರಣ : ಮೂವರು ಆರೋಪಿಗಳ ಸೆರೆ

Update: 2021-02-11 11:51 IST

ಶಿವಮೊಗ್ಗ, ಫೆ.11 : ಶಿರಾಳಕೊಪ್ಪ ಪಟ್ಟಣ ಪಂಚಾಯತಿಗೆ ಸೇರಿದ ಟ್ರ್ಯಾಕ್ಟರ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜ.30ರಂದು ಜಲ ಶುದ್ದೀಕರಣ ಘಟಕದ ಹತ್ತಿರ ನಿಲ್ಲಿಸಿದ್ದ 5.50 ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್ ಇಂಜಿನ್ ಕಳ್ಳತನ ಮಾಡಲಾಗಿದೆ ಎಂದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ನಿವಾಸಿಗಳಾದ ಮಂಜುನಾಥ (29), ಹರೀಶ್ (21) ಮತ್ತು ನಾಗಭೂಷಣ (33) ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಕಂಡಿ, ಪೊಲೀಸ್ ವೃತ್ತ ನಿರೀಕ್ಷಕ ಗುರುರಾಜ ಎನ್  ಮೈಲಾರ್ ಅವರ ಮಾರ್ಗದರ್ಶನದಲ್ಲಿ ಪಿಎಸ್‍ಐ ರಮೇಶ್ ಹಾಗೂ ಸಿಬ್ಬಂದಿ ಕೊಟ್ರೇಶಪ್ಪ, ಆದರ್ಶ, ಮಂಜುನಾಥ ಮತ್ತು ಕಾಂತೇಶ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News